ಮೂಡುಬಿದಿರೆ:ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿ ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಆಳ್ವಾಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಉಮಾರುಫಸ್ ಹೇಳಿದರು.
ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 2019-20ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಕ್ಕಳನ್ನು ಅಭಿನಂದಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿ, ಎನ್‍ಸಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ವಾರ್ಷಿಕವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಆಳ್ವಾಸ್ ಪ್ರೌಢ ಶಾಲೆಯ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.ಸಹಾಯಕ ಮುಖ್ಯ ಶಿಕ್ಷಕ ಜಯಂತ್ ಶೆಟ್ಟಿ, ವಿವಿಧ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.
