ಕಲಬುರ್ಗಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಇಂದು ಮಧ್ಯಾಹ್ನ 3 ಗಂಟೆಗೆ ಕಲಬುರ್ಗಿಯಲ್ಲಿ ಬೃಹತ್ ಸಮಾವೇಶವೊಂದು ನಡೆಯಲಿದೆ. ಪೀಪಲ್ಸ್ ಫೋರಂ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶಕ್ಕೆ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಿಎಂ ಹೆಚ್ಡಿಕೆ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರ್ಗಿಯ ಪೀರ್ ಬಂಗಾಲಿ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆವಿರುದ್ಧ ನಡೆಯಲಿರುವ ಈ ಸಮಾವೇಶಕ್ಕೆ ಯಾದಗಿರಿ, ರಾಯಚೂರು, ಸುರುಪುರ ಸೇರಿದಂತೆ ಹಲವು ಕಡೆಗಳಿಂದ ಜನ ಪಾದಯಾತ್ರೆ ಮೂಲಕ ಕಲಬುರ್ಗಿಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಪಿಐಎಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಕುಮಾರ್ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

