ಕಲ್ಲಡ್ಕ:ಪ್ರಧಾನಮಂತ್ರ್ರಿಯವರು ನೀತಿ ಆಯೋಗದ ಮೂಲಕ ಅಟಲ್ ಟಿಂಕರಿಂಗ್ ಲ್ಯಾಬ್‍ಗಳಿಂದ ತಂತ್ರಜ್ಞಾನದ ಶಿಕ್ಷಣವು ದೊರಕುವಂತೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಶ್ರೀರಾಮ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷರಾದ ಶ್ರೀ ಸುಜಿತ್ ಕೊಟ್ಟಾರಿ ಇವರು ಹೇಳಿದರು.

ಇವರು ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ವಿದ್ಯಾಲಯ ಹಾಗೂ ಶ್ರೀರಾಮ ಅಟಲ್ ಟಿಂಕರಿಂಗ್ ಲ್ಯಾಬ್ ವತಿಯಿಂದ ಆಯೋಜಿಸಿದ “ಅಟಲ್ ಟಿಂಕರಿಂಗ್ ಉತ್ಸವ-2020”ನ್ನು ಉದ್ಘಾಟಿಸಿ ಮಾತನಾಡಿದರು.
ಬಾಳ್ತಿಲ ಕ್ಲಸ್ಟರ್‍ನ ವಲಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಆರತಿ ಅಮೀನ್‍ರವರು ಮೊದಲು ನಗರಗಳಲ್ಲಿ ಸಿಗುತ್ತಿದ್ದ ಶಿಕ್ಷಣ ಈಗ ಗ್ರಾಮೀಣ ಪ್ರದೇಶಗಳಲ್ಲಿ ದೊರೆಯುವಂತಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ಇವರು ಅಟಲ್ ಟಿಂಕರಿಂಗ್ ಲ್ಯಾಬ್‍ನ ಅರ್ಥ ಮತ್ತು ಉದ್ದೇಶಗಳನ್ನು ತಿಳಿಸಿ, ವಿದ್ಯಾರ್ಥಿಗಳು ಅನ್ವೇಷಣೆ ನಡೆಸಬೇಕು ಎಂದು ಪ್ರೋತ್ಸಾಹಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ವಸಂತ ಬಲ್ಲಾಳ್ ಹಾಗೂ ವಿದ್ಯಾಕೇಂದ್ರದ ಸಹಸಂಚಾಲಕರಾದ ಶ್ರೀ. ರಮೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕು. ಶಿವಾನಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
