ಬಂಟ್ವಾಳ: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರವು ಬಹಳಷ್ಟು ವೆಚ್ಚವನ್ನು ಮಾಡುತ್ತಿದೆ. ಪೋಷಕರು ಪ್ರತಿಷ್ಠೆ ಬಿಟ್ಟು ಮಕ್ಕಳ ಭವಷ್ಯಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳಿಗೆ ಸೇರಿಸುವಂತಾಗಬೇಕು ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದರು.

ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ಬಾಳೆಪುಣಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಎಂ.ಆರ್.ಪಿ.ಎಲ್ ಸಹಕಾರದಿಂದ ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ವಹಿಸಿದ್ದರು. ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸಕರ್ಕೇರ, ಉಪಾಧ್
ಶಾಲಾ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿ, ಸಹಶಿಕ್ಷಕಿ ಅನುಸೂಯ ವಂದಿಸಿದರು. ಶೋಭಿತಾ ಹಾಗೂ ವಿಜಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
