ಬಂಟ್ವಾಳ: ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಅನುಷ್ಠಾನಗೊಳಿಸಲು ಸ್ಥಳೀಯ ಸರಕಾರದೊಂದಿಗೆ ಗ್ರಾಮಸ್ಥರು ಕೈ ಜೋಡಿಸಿದಾಗ ಗ್ರಾಮದ ಅಭಿವೃದ್ಧಿ ಸಾಧ್ಯವಿದೆ ಎಂದು ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕುಮಂಗಿಲ ಅವರು ಹೇಳಿದರು.

2901pkt3
ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ಬುಧವಾರ ಜರಗಿದ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮದ ಮತ್ತಷ್ಟು ಅಭಿವೃದ್ಧಿಗಾಗಿ ಮುಂದಿನ ಕಾರ್ಯ ಯೋಜನೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಅಳವಡಿಸಿಕೊಂಡಿದ್ದು ಅನುಷ್ಠಾನಗೊಳಿಸಬೇಕಾಗಿದೆ. ಇದಕ್ಕಾಗಿ ಜಿಲ್ಲಾ ಪಂಚಾಯತ್, ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ ಎಂಬ ಗ್ರಾಮಸ್ಥರ ಆರೋಪಕ್ಕೆ ಉತ್ತರಿಸಿದ ಅವರು ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಗೊಳ್ಳುತ್ತಿದ್ದು, ಶೀಘ್ರ ಕಾರ್ಯಾರಂಭಗೊಳ್ಳಲಿದೆ ಎಂದರು.
ಕಳೆದ ಐದು ವರ್ಷಗಳಲ್ಲಿ ಯಾವುದೇ ತಾರತಮ್ಯವಿಲ್ಲದೆ ಪ್ರಾಮಾಣಿಕವಾಗಿ, ಕಾನೂನು ಬದ್ಧವಾಗಿ ಗ್ರಾಮದ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ಅಭಿವೃದ್ಧಿ ಕಾರ್ಯ ನಡೆಸಲಾಗಿದೆ ಎಂದು ಹೇಳಿದರು.
ಕುಡಿಯುವ ನೀರನ್ನು ಯಾವುದೇ ಕಾರಣಕ್ಕೂ ದುರುಪಯೋಗ ಪಡಿಸಬಾರದು. ನೀರಿನ ಬಿಲ್ ಸರಿಯಾಗಿ ಪಾವತಿಸಿ ಸಹಕರಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಿಂದ ನೀರಿನ ಸಮಸ್ಯೆ ದೂರವಾಗುವುದು ಎಂದರು.
ಮಹಾತ್ಮ ಗಾಂ„ ಉದ್ಯೋಗ ಖಾತರಿ ಯೋಜನೆಯಲ್ಲಿ ಭತ್ತ ಕೃಷಿಗೆ ಅವಕಾಶ ನೀಡಲು ಮನವಿ ಸಲ್ಲಿಸಲು ಈ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪಂಚಾಯತ್ ವ್ಯಾಪ್ತಿಯಲ್ಲಿ ಕಸ ಎಸೆಯದೆ ಸ್ವಚ್ಛ ಗ್ರಾಮ ಪರಿಕಲ್ಪನೆಗೆ ಗ್ರಾಮಸ್ಥರೆಲ್ಲರೂ ಸಹಕಾರ ನೀಡಬೇಕು ಎಂದು ವಿನಂತಿಸಲಾಯಿತು.
ಬಂಟ್ವಾಳ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ಅವರು ಮಾರ್ಗದರ್ಶಿ ಅ„ಕಾರಿಯಾಗಿ ಸಭೆ ನಿರ್ವಹಿಸಿದರು. ದ.ಕ.ಜಿಲ್ಲಾ ಪಂಚಾಯತ್‍ನ ಡಿ.ಇ.ಸಿ. ಜಿಲ್ಲಾ ಸಮಾಲೋಚಕಿ ಪ್ರೇಮಾ ಅವರು ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ ಆಯುಷ್ ವೈದ್ಯಾ„ಕಾರಿ ಡಾ.ಸೋಹನ್ ಕುಮಾರ್ ಎನ್., ವೇಣೂರು ಉಪ ವಲಯ ಅರಣ್ಯಾ„ಕಾರಿ ಸುನಿಲ್ ಕುಮಾರ್, ಬಂಟ್ವಾಳ ಕೃಷಿ ಅ„ಕಾರಿ ನಾರಾಯಣ ನಾಯ್ಕ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸಿಂಧು ಕೆ.ವಿ.,ಕಂದಾಯ ಇಲಾಖೆಯ ರಾಜು ಲಮಾಣಿ, ವಗ್ಗ ಮೆಸ್ಕಾಂ ಇಂಜಿನಿಯರ್ ಟಿ.ಎನ್ ರಂಗಸ್ವಾಮಿ, ಆರೋಗ್ಯ ಇಲಾಖೆಯ ಸಂಧ್ಯಾ ಇಲಾಖಾ ಮಾಹಿತಿ ನೀಡಿದರು
ತಾ.ಪಂ.ಸದಸ್ಯ ರಮೇಶ್ ಪೂಜಾರಿ, ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮಿ ಜೆ.ಬಂಗೇರ, ಗ್ರಾ.ಪಂ. ಸದಸ್ಯರಾದ ಲಕ್ಷ್ಮೀ ನಾರಾಯಣ ಹೆಗ್ಡೆ,ಯೋಗೇಂದ್ರ,ಸರೋಜಾ ಡಿ.ಶೆಟ್ಟಿ,ಸೀತಾ,ವಸಂತಿ,ಸುಮಿತ್ರಾ,ಅಂಗನವಾಡಿ, ಆಶಾ ಕಾರ್ಯಕರ್ತೆಯರು,ಪಂಚಾಯತ್ ಸಿಬಂದಿ ವರ್ಗ ಉಪಸ್ಥಿತರಿದ್ದರು.
ಗ್ರಾ.ಪಂ.ಅಭಿವೃದ್ಧಿ ಅ„ಕಾರಿ ರಾಜಶೇಖರ ರೈ ಅವರು ಸ್ವಾಗತಿಸಿ, ಲೆಕ್ಕ ಪತ್ರ ಮಂಡಿಸಿದರು. ಕಾರ್ಯದರ್ಶಿ ಜೋಯೆಲ್ ಪ್ರಶಾಂತ್ ಫೆಲೆರೋ ವಂದಿಸಿದರು.

By suddi9

Leave a Reply

Your email address will not be published. Required fields are marked *