ಬಂಟ್ವಾಳ: ಜೇಸಿಐ ಬಂಟ್ವಾಳದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಸಜೀಪಮೂಡದ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆಯಿತು.
ಭಾರತೀಯ ಭೂ ಸೇನೆಯ ಯೋಧ ಸುಧಾಕರ ಶೆಟ್ಟಿ ಅಮ್ಟಾಡಿ ಪ್ರತಿಜ್ಞಾ ವಿಧಿ ಭೋದಿಸಿದರು.
ಜೇಸಿಐ ಬಂಟ್ವಾಳದ ಅಧ್ಯಕ್ಷ ಸದಾನಂದ ಬಂಗೇರಾ ಅಧ್ಯಕ್ಷತೆ ವಹಿಸಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಯತೀಶ್ ಕರ್ಕೇರಾ, ಕಾರ್ಯದರ್ಶಿ ಗಣೇಶ್ ಕುಲಾಲ್, ಸದಸ್ಯರಾದ ಉಮೇಶ್ ಮೂಲ್ಯ, ಉಮೇಶ್ ಪೂಜಾರಿ, ಶಾಲಾ ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್. ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಬಾಲಕೃಷ್ಣ ಸ್ವಾಗತಿಸಿ ವಂದಿಸಿದರು, ಜೇಸಿಐ ಬಂಟ್ವಾಳದ ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

