ಮಂಗಳೂರು:ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಡಿ.19ರಂದು ನಡೆದ ಪ್ರತಿಭಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನುಪ್ರತ್ಯಕ್ಷವಾಗಿ ನೋಡಿದವರು ಫೆ.6ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ತನಕ ಸಾಕ್ಷ್ಯ ಅಥವಾ ಹೇಳಿಕೆ ನೀಡಲು ಅಂತಿಮ ಅವಕಾಶ ನೀಡಲಾಗಿದೆ.
ಸಾಂದರ್ಬಿಕ ಚಿತ್ರ:
ಘಟನೆಯಲ್ಲಿ ಗುಂಡೇಟಿನಿಂದ ನೌಶೀನ್ ಮತ್ತು ಜಲೀಲ್ ಕುದ್ರೋಳಿ ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಘಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಯಾವುದೇ ಸಾಕ್ಷ್ಯ ಅಥವಾ ಹೇಳಿಕೆ ನೀಡಬಹುದು. ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು- ಇಲ್ಲಿಗೆ ಹಾಜರಾಗಿ ನೀಡಲು ಅವಕಾಶವಿದೆ. ಅನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

