ಕಾಸರಗೋಡು: ಪತಿ ಹಾಗೂ ಪತಿಮನೆಯವರಿಂದ ನಿರಂತರ ವರಕ್ಷಿಣೆ ಕಿರುಕುಳದಿಂದ ಬೇಸತ್ತ ನವವಿವಾಹಿತೆಯೊಬ್ಬಳು ಬಾವಿಗೆ ಹಾರಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಅಂಬಲತ್ತರ ಎಂಬಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ.ಮೃತಳನ್ನು ಪರಪಳ್ಳಿ ನಿವಾಸಿ ಜಾಶೀರ್ ಎಂಬಾತನ ಪತ್ನಿ ಸಫಿದಾ(19) ಎಂದು ಹೆಸರಿಸಲಾಗಿದೆ.
ಈಕೆಗೆ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಶುಕ್ರವಾರ ಮುಂಜಾನೆ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಮನೆಮಂದಿ ಹುಡುಕಾಟ ನಡೆಸಿದ್ದರು. ಸಂಜೆಯ ವೇಳೆಯಷ್ಟೇ ಮನೆಯ ಪಕ್ಕದ ತೋಟವೊಂದರ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ಕಾಸರಗೋಡಿನಿಂದ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಅದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪೆರಿಯಾರಂ ಮೆಡಿಕಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಫಿದಾ ಪತಿ ಜಾಶೀರ್ ಗಲ್ಫ್ ನಲ್ಲಿ ಉದ್ಯೋಗ ಹೊಂದಿದ್ದು, ಹೆಚ್ಚುವರಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ

