ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ„ಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವತಿಯಿಂದ ಆರ್ಥಿಕ ಸಹಾಯಧನವಾಗಿ 5 ಲಕ್ಷ ರೂ. ಮೊತ್ತದ ಚೆಕ್ನ್ನು ಶುಕ್ರವಾರ ಹಸ್ತಾಂತರಿಸಲಾಯಿತು.
ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ನಿರ್ದೇಶಕ ಶ್ರೀಹರಿ ಅವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಅವರಿಗೆ ಚೆಕ್ ಹಸ್ತಾಂತರಿಸಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ಯೋಜನಾ„ಕಾರಿ ಪುಷ್ಪರಾಜ್, ಯೋಜನೆ ಬಂಟ್ವಾಳ ಯೋಜನಾ„ಕಾರಿ ಜಯಾನಂದ, ವಲಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿ, ವಿವಿಧ ಗ್ರಾಮ ಸಮಿತಿ, ಪದಾ„ಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
