ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ 2020-2023 ರ ಅವಧಿಗೆ ನೂತನ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ ಬಡಗಬೆಳ್ಳೂರು ಬಾಳಿಕ ಅವರನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಅವರು ನಿಯುಕ್ತಿಗೊಳಿಸಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಸದಸ್ಯರಾಗಿರುವ ಅವರು ಬಂಟ್ವಾಳ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾಗಿ ಹಲವಾರು ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅನುಭವವನ್ನು ಹೊಂದಿರುವ ದೇವಪ್ಪ ಪೂಜಾರಿ ಅವರನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸಿದೆ.
ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹಾಗೂ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಪ್ರಮುಖರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

