ಬಂಟ್ವಾಳ: ಫ್ಯೂಚರ್ ಕ್ರಿಯೇಟರ್ಸ್ ಚಾರೀಟೇಬಲ್ ಟ್ರಸ್ಟ್ ಅಸೋಸಿಯೇಷನ್(ರಿ) ಶೈನ್ ಗೈಸ್ ಕುಕ್ಕಾಜೆ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಆದಿತ್ಯವಾರ ಮಂಚಿ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

IMG-20200223-WA0314ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ ಉಸ್ತಾದರು ಶಿಬಿರವನ್ನು ಉದ್ಘಾಟಿಸಿದರು.ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹಾಜಬ್ಬ ಹರೇಕಳರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, “ನನಗೆ ರಕ್ತದಾನ ಮಾಡಲು ಅತಿಯಾದ ಮನಸ್ಸಿದ್ದರೂ ನನ್ನ ದೇಹಕ್ಕೆ ಆ ಸಾಮರ್ಥ್ಯವಿಲ್ಲ.

IMG-20200223-WA0211 ಯುವಕರು ಆದಷ್ಟು ರಕ್ತದಾನ ಮಾಡಲು ಮುಂದಾಗಿ ಎಂದರು. ಹಾಗೆಯೇ ವೇಷ ಧರಿಸಿ ಹಣ ಸಂಗ್ರಹಿಸಿ ಬಡ ರೋಗಿಗಳಿಗೆ ನೆರವಾದ ವಿಕ್ಕಿ‌ ಶೆಟ್ಟಿ ಬೆದ್ರ ಅವರನ್ನು ಸನ್ಮಾನಿಸಲಾಯಿತು.ಗಫ್ಫಾರ್ ಸಾಗರ್ ಅಧ್ಯಕ್ಷತೆ ವಹಿಸಿದ್ದರು.

IMG-20200223-WA0293ಜಿಪಂ ಸದಸ್ಯ ಎಂ.ಎಸ್. ಮೊಹಮ್ಮದ್, ಹಿದಾಯ ಫೌಂಡೇಶನ್ ಅಧ್ಯಕ್ಷ ಹನೀಫ್ ಗೋಳ್ತಮಜಲು, ರೆ ಫಾ.ಹೆನ್ರಿ ಡಿಸೋಜ, ಕುಕ್ಕಾಜೆ ಜುಮಾ‌ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ.ಎ.ಆರ್, ಮಂಚಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ದಾಸ್, ಅಶ್ರಫ್ ಕಲ್ಕಟ್ಟ, ಅಬ್ದುಲ್ ಕರೀಂ, ಕೆ.ಎಂ. ಶರೀಫ್, ಹಸೈನಾರ್, ಆಶಿಕ್ ಕುಕ್ಕಾಜೆ, ರಫೀಕ್, ನಝೀರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಇದರ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು.ಈ ಶಿಬಿರದಲ್ಲಿ ಒಟ್ಟು 100 ಮಂದಿ ರಕ್ತದಾನ ಮಾಡಿದರು.

IMG-20200224-WA0051

IMG-20200224-WA0053

IMG-20200224-WA0055

IMG-20200224-WA0056 IMG-20200224-WA0058

By Suddi9

Leave a Reply

Your email address will not be published. Required fields are marked *