ಬಂಟ್ವಾಳ: ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಭಾರತದಾದ್ಯಂತ ನಡೆಸುತ್ತಿದ್ದು, ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಪಕ್ಷಿ ಸಂಕುಲಗಳ ಅಳಿವು-ಉಳಿವು ನಮ್ಮ ಪಾತ್ರ ವಿಷಯದ ಕುರಿತು ಕನ್ನಡ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ಪಕ್ಷಿ ಸಂರಕ್ಷಣೆ ಕುರಿತು ಮಾಹಿತಿ ನೀಡಿದ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಹೇಳಿದರು.

IMG_20200227_112709 ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಕಡ್ತಾಲಬೆಟ್ಟುಇಲ್ಲಿ ಶಾಲಾ ಮಟ್ಟದ ಗುಬ್ಬಚ್ಚಿ ಗೂಡು ಪ್ರತಿಭಾನ್ವೇಷಣೆ-2020 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದರು.ಇದೇ ವೇಳೆ ಈ ಸ್ಪರ್ಧೆಯ ವಿಜೇತರಿಗೆಪ್ರಮಾಣ ಪತ್ರ ಮತ್ತು ಪದಕ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಭಾಸ್ಕರ್ ಹಾಗು ಸಹ ಶಿಕ್ಷಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *