ಕಿನ್ನಿಗೋಳಿ:ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಶನಿವಾರ ನಡೆಯಿತು. ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಡಾಮಾರೀಕರಣ, ವಿದ್ಯುತ್ ಸಂಪರ್ಕ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.29KinniMennabettu (1)
ಗ್ರಾಮಸ್ಥರ ಬವಣೆಗಳಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕರು ಕಿವಿಮಾತು ಹೇಳಿದರು. ಕೆಮ್ಮಡೆಯಲ್ಲಿ ಸೈಟುಗಳು ಮಂಜೂರು ಆಗಿದ್ದು ಅರ್ಹರಿಗೆ ಈ ಸಂದರ್ಭ ಹಕ್ಕು ಪತ್ರಗಳನ್ನು ವಿತರಿಸಲಾಯಿತು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಉಪಾಧ್ಯಕ್ಷ ಮೋರ್ಗನ್ ವಿಲಿಯಂ ಸಾಲಿನ್ಸ್, ಪಂಚಾಯಿತಿ ಸದಸ್ಯರು, ಪಿಡಿಒ ಡಾ. ರಮ್ಯಾ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *