ಬಂಟ್ವಾಳ : ನರಿಕೊಂಬು ಮತ್ತು ಶಂಭೂರು ಗ್ರಾಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿಂದೂ ರುದ್ರಭೂಮಿ(ದೇವಭೂಮಿ) ಸಮಿತಿ ವತಿಯಿಂದ ಸುಮಾರು ೪೦ ಲಕ್ಷ ರೂ. ವೆಚ್ಚದಲ್ಲಿ ಕೊರಂಗಲಪಾದೆಯಲ್ಲಿ ನಿರ್ಮಾಣಗೊಂಡ ಹಿಂದೂ ರುದ್ರಭೂಮಿಯು ಮಾ. 1 ರಂದು ಲೋರ್ಕಾಣೆಗೊಳ್ಳಲಿದೆ ಎಂದು ರುದ್ರಭೂಮಿ ಸಮಿತಿ ಅಧ್ಯಕ್ಷ, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು ತಿಳಿಸಿದರು.IMG_20200229_120057

ಅವರು ಶುಕ್ರವಾರ ಇಲ್ಲಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರುದ್ರಭೂಮಿಯಲ್ಲಿ ಎರಡು ಚಿತಾಗಾರ ಸಹಿತ ಕಟ್ಟಿಗೆ ದಾಸ್ತಾನು ಕೊಠಡಿ, ಶೆಡ್ ನಿರ್ಮಿಸಿ ಇಂಟರ್ ಲಾಕ್ ಅಳವಡಿಕೆ, ಸ್ನಾನಗೃಹ ಮತ್ತು ಶೌಚಾಲಯ ನಿರ್ಮಿಸಲಾಗಿದೆ. ಒಂದು ಎಕರೆ ಜಮೀನಿನಲ್ಲಿ ಕ್ರೀಡಾಂಗಣ ಸಿದ್ಧಗೊಂಡಿದ್ದು, ಬಯಲು ರಂಗಮಂದಿರ ಮತ್ತು ವಾಹನ ಪಾರ್ಕಿಂಗ್ ವ್ಯವಸ್ಥೆ ಇದೆ. ಸುಮಾರು ೧೨ ಅಡಿ ಎತ್ತರಕ್ಕೆ ತ್ರಿಶೂಲಧಾರಿ ಶಿವನ ವಿಗ್ರಹ ನಿರ್ಮಿಸಿ ಎದುರು ಆಕರ್ಷಕ ಹೂದೋಟ ನಿರ್ಮಿಸಲಾಗಿದೆ ಎಂದರು.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಹಿತ, ಪಾಣೆಮಂಗಳೂರು ಸತ್ಯಶ್ರೀ ಸೇವಾ ಟ್ರಸ್ಟ್, ಧರ್ಮಸ್ಥಳ ಕ್ಷೇತ್ರ, ವಿವಿಧ ಸಂಘ ಸಂಸ್ಥೆಗಳು ಹಾಗೂ ದಾನಿಗಳ ನೆರವಿನಿಂದ ೪೦ಲಕ್ಷ ರೂ.ವೆಚ್ಚದಲ್ಲಿ ಹಿಂದೂ ರುದ್ರಭೂಮಿ ನಿಮಾಣಗೊಂಡಿದೆ. ಶಾಸಕರ ೫ ಲಕ್ಷ ರೂ.ಅನುದಾನದಲ್ಲಿ ಕಾಂಕ್ರೀಟ್ ರಸ್ತೆ, ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ ಅವರ ೫ ಲಕ್ಷ ರೂ.ಅನುದಾನ, ಜಿಲ್ಲಾ ಉಸ್ತುವಾರಿ ಸಚಿವರಿಂದಲೂ ಅನುದಾನದ ಭರವಸೆ ಸಿಕ್ಕಿದೆ ಎಂದರು.
ಬೆಳಗ್ಗೆ ೯.೩೦ಕ್ಕೆ ಹಿಂದೂ ರುದ್ರಭೂಮಿಯನ್ನು ಆರ್‌ಎಸ್‌ಎಸ್ ಮುಂದಾಳು ಡಾ| ಪ್ರಭಾಕರ ಭಟ್ ಕಲ್ಲಡ್ಕ ಲೋಕಾರ್ಪಣೆಗೊಳಿಸಲಿದ್ದು, ಶಾಸಕ ರಾಜೇಶ್ ನಾÊಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದು, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ  ಯಕ್ಷಗಾನ ಬಯಲಾಟ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ ಜರಗಲಿದೆ ಎಂದರು.
ಕಬಡ್ಡಿ ಪಂದ್ಯಾಟ
ಮಾ. ೨ರಂದು ಸಂಜೆ ೭ಕ್ಕೆ ಮುಕ್ತ ಕಬಡ್ಡಿ ಪಂದ್ಯಾಟವನ್ನು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ಉದ್ಘಾಟಿಸಲಿದ್ದು, ಸಂಸದ ನಳಿನ್‌ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯಕ್ಷ ಬಿ.ರಘು ಸಪಲ್ಯ, ಪ್ರಮುಖರಾದ ಕಿಶೋರ್ ಶೆಟ್ಟಿ, ಪ್ರೇಮನಾಥ ಶೆಟ್ಟಿ, ವಸಂತ ಭೀಮಗದ್ದೆ, ಸುರೇಶ ಕೋಟ್ಯಾನ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *