ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಒಂದು ತಿಂಗಳ ಜಾತ್ರಾ ಮಹೋತ್ಸವಕ್ಕೆ ಅಡ್ಡೂರಿನ ನಂದ್ಯ ಭಗವತಿ ಕ್ಷೇತ್ರದಿಂದ ಭಗವತಿ ದೇವಿಯ ಮೊಗಮೂರ್ತಿ ಹಾಗೂ ಅರಸು ದೈವದ ಆಯುಧ ಪೊಳಲಿಗೆ ಬರುತ್ತದೆ. ಈ ವೇಳೆ ತೂಟೆಧಾರಣೆ ನಡೆಸಲಾಗುತ್ತದೆ ಅವರನ್ನುಪೊಳಲಿಯ ಆಡಳಿತ ಮಂಡಳಿ ವಿಶೇಷ ರೀತಿಯಲ್ಲಿ ಬರಮಾಡಿಸಿಕೊಳ್ಳುತ್ತಾರೆ.
ಅಲ್ಲಿಂದ ಪೊಳಲಿ ದೇವಸ್ಥಾನಕ್ಕೆ ಒಂದು ಸುತ್ತು ಬರಲಾಗುತ್ತದೆ. ಭಂಡಾರದ ಮನೆಯವರಿಗೆ ಸೂಕ್ತ ಸ್ಥಳಾವಕಾಶ, ಯಥೋಚಿತ ಸ್ಥಾನ ಅಲ್ಲಿಂದ ದೇವರನ್ನು ಭೇಟಿ ಮಾಡಿ ಅರಸು ದೈವದ ಆಯುಧ ಹಾಗೂ ಭಗವತಿಯ ದೇವಿಯ ಮೊಗವನ್ನು ಇಟ್ಟ ಬಳಿಕ ದ್ವಜಣಗೊಳ್ಳುತ್ತದೆ.
