ಬಂಟ್ವಾಳ: ಸೆಮಿಸ್ಟರ್ ಪರೀಕ್ಷೆಯಲ್ಲಿ ಗಳಿಸಿದ ಅಂಕ ಕಡಿಮೆಯಾಯಿತು ಎಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಗ್ರಾಮದ ಮೇಲಿನ ಏರ್ಯ ಎಂಬಲ್ಲಿ ನಡೆದಿದೆ.
ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಪ್ರಥಮ ಎಂ.ಬಿ.ಎ. ವಿದ್ಯಾರ್ಥಿನಿ ರಕ್ಷಿತಾ( 23) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.ಅಮ್ಟಾಡಿ ನಿವಾಸಿ ಯಾದವ ಎಂಬವರ ಪುತ್ರಿ ರಕ್ಷಿತಾ ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದಳು. ಪ್ರಥಮ ಸೆಮಿಸ್ಟರ್ ನಲ್ಲಿ ಅಂಕ ಕಡಿಮೆಯಾಗಿದೆ ಎಂಬ ಕಾರಣಕ್ಕಾಗಿ ನೊಂದ ಆಕೆ ಮನೆಯ ಅಡುಗೆ ಕೋಣೆಯಲ್ಲಿ ಚೂಡಿದರ್ ಶಾಲು ಬಳಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಲೀಸರು ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.ಶಾಸಕ ರಾಜೇಶ್ ನಾಯ್ಕ್ ಯು.,ಅಮ್ಟಾಡಿ ಗ್ರಾಪಂ ಅಧ್ಯಕ್ಷ ಹರೀಶ್ ಪಡು ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
