ಬೆಂಗಳೂರು:ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ನಿವೃತ್ತಿ ಅದ ಕೇವಲ 4 ತಿಂಗಳದಲ್ಲಿ ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿರುವುದಕ್ಕೆ ಅಡ್ವೋಕೇಟ್ ತಾಹೀರ್ ಹುಸೇನ್ ರಾಜ್ಯಾಧ್ಯಕ್ಷರು, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿಗಳು ದೇಶದ ಜನರಿಗೆ ಮತ್ತು ಭವಿಷ್ಯದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಏನು ಸಂದೇಶ ನೀಡುತ್ತಿದ್ದಾರೆ ಎಂದು ಕೇಳಿದ್ದಾರೆ.ರಾಷ್ಟ್ರಪತಿಗಳ ನಡೆಯನ್ನು ಟೀಕಿಸಿದ್ದು, ಇದು ನ್ಯಾಯಾಂಗದ ಸ್ವಾತಂತ್ರ್ಯದ ನಡೆಯ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಗೊಗೊಯ್ ಅವರ ನಡೆಯನ್ನು ಇದು ದೇಶಕ್ಕೆ ಕೆಟ್ಟ ನಿದರ್ಶನವನ್ನು ಉಂಟುಮಾಡುತ್ತದೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಭಾರೀ ಧಕ್ಕೆಯನ್ನುಂಟುಮಾಡುತ್ತದೆ ಎಂದಿದ್ದಾರೆ.ಸರ್ವೋಚ್ಚ ನ್ಯಾಯಾಲಯದ ಮೇಲೆ ಜನರ ನಂಬಿಕೆ ಹೆಚ್ಚಿಸುವ ದೃಷ್ಟಿಯಿಂದ ರಂಜನ್ ಗೊಗೋಯ್ ಯವರು ಈ ಹುದ್ದೆಯನ್ನು ತಿರಸ್ಕರಿಸಬೇಕು ಎಂದು ಅವರು ಒತ್ತಾಯಿಸಿದರು.ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಮಧ್ಯೆ ಅಧಿಕಾರವನ್ನು ಬೇರ್ಪಡಿಸುವುದು ನಮ್ಮ ಸಂವಿಧಾನದ ಮೂಲ ರಚನೆಯ ಭಾಗವಾಗಿದೆ. ಅದನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಾಶಮಾಡಿದೆ ಎಂದು ತಾಹೀರ್ ಹುಸೇನ್ ಹೇಳಿದರು.
ಸರ್ವೋಚ್ ನ್ಯಾಯಾಲಯ ಮತ್ತು ಹೈ ಕೋರ್ಟ್ ನಾ ನಿವೃತ್ತಿ ನ್ಯಾಯಾಧೀಶರು ಯಾವುದೇ ರಾಜಕೀಯ ಹುದ್ದೆ ಅಲಂಕರಿಸಿದಂತೆ ಕಾನೂನು ರಚನೆ ಆಗಬೇಕೆಂದು ಅವರು ಇದೆ ಸಂದರ್ಭದಲ್ಲಿ ಒತ್ತಾಯಿಸಿದರು.

