ಶ್ರೀನಿವಾಸಪುರ: ಪಟ್ಟಣದಲ್ಲಿ ಅಗ್ನಿಶಾಮಕ ದಳ ಹಾಗೂ ಪುರಸಭೆ ವತಿಯಿಂದ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು.ಕೊರೊನಾ ವೈರಾಣು ಉಂಟುಮಾಡಿರುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ಸಮಾಜದ ಎಲ್ಲ ವರ್ಗದ ಜನರೂ ಸಹಕರಿಸಬೇಕು. ಸ್ವಚ್ಛತೆ ಪಾಲಿಸಬೇಕು ಎಂದು ಪಟ್ಟಣದ ಅಗ್ನಿಶಾಮಕ ಠಾಣಾಧಿಕಾರಿ ಎಸ್.ಶಿವಕುಮಾರ್‌ ಹೇಳಿದರು.26svp3ep

ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಮಾತನಾಡಿ, ಪಟ್ಟಣದಲ್ಲಿ ಮೂರು ದಿನಗಳಿಂದ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ. ಈ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ಹೇಳಿದರು.ಅಗ್ನಿಶಾಮಕ ದಳದ ಸಿಬ್ಬಂದಿ ಸಿ.ಕದಿರಪ್ಪ, ಎಚ್‌.ಶ್ರೀನಿವಾಸ, ಜಬಿವುಲ್ಲಾ ಖಾನ್‌, ಗೋವಿಂದರಾಜು ಸಿಂಪಡಣಾ ಕಾರ್ಯದಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *