ಬಂಟ್ವಾಳ: ಕೊರೊನಾ ಆತಂಕದಿಂದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಫರಂಗಿಪೇಟೆ ಸಮೀಪದ ಅಬೆಟ್ಟಿನಲ್ಲಿ ಶುಕ್ರವಾರ ನಡೆದಿದೆ.ಅಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (55) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಅಡ್ಯಾರ್ ನ ಪೆಟ್ರೋಲ್ ಬಂಕ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಕೊರೊನಾ ವೈರಸ್ ಖಾಯಿಲೆ ಬೆಳಕಿಗೆ ಬಂದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಕೊರೋನಾ ತನಗೂ ತಗುಲಿರಬಹುದು ಎಂದು ಅನುಮಾನಿತರಾಗಿ ಮಾನಸಿಕವಾಗಿ ನೊಂದು ಗುರುವಾರ ರಾತ್ರಿ ಮನೆಯ ಗೋಡೆ ಹಾಗೂ ಡೆತ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಕೇಸ್ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *