ಬಂಟ್ವಾಳ: ತುಂಬೆ ಗ್ರಾಮದಲ್ಲಿ ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ಆಹಾರ ವಸ್ತುಗಳ ವಿತರಣೆ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಮಾಹಿತಿ ಸಂಗ್ರಹಿಸುವ ಕುರಿತು ಶಾಸಕ ಯು.ಟಿ.ಖಾದರ್ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಅವರು ರವಿವಾರ ತುಂಬೆ ಗ್ರಾ.ಪಂ.ಸಭಾಂಗಣದಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಪಡಿತರ ಅಕ್ಕಿ ವಿತರಣೆ, ಸೋಂಕಿತ ವ್ಯಕ್ತಿಯ ಜತೆಗಿದ್ದ ಸಂಪರ್ಕಿತರ ಆರೋಗ್ಯ ತಪಾಸಣೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಮಂಗಳೂರು ತಾ.ಪಂ.ಅಧ್ಯಕ್ಷ ಮೊಹಮ್ಮದ್ ಮೋನು, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯ ಗಣೇಶ್ ಸುವರ್ಣ, ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ, ತಾ.ಪಂ.ಇಒ ರಾಜಣ್ಣ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆರೋಗ್ಯ ಕೇಂದ್ರದ ಡಾ.ಸುದರ್ಶನ್, ಗ್ರಾಮಾಂತರ ಪಿಎಸ್ಐ ಪ್ರಸನ್ನ, ಮಸೀದಿ ಅಧ್ಯಕ್ಷ ಇಮ್ತಿಯಾಜ್ ಆಲ್ಫಾ, ಕಾರ್ಯದರ್ಶಿ ಮೂಸಬ್ಬ, ಗ್ರಾ.ಪಂ.ಸದಸ್ಯರು, ವರ್ತಕರು ಉಪಸ್ಥಿತರಿದ್ದರು.
