ಕೈಕಂಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕರೋರ್ವರು ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವಿಗೀಡಾದ ಘಟನೆ ಮಂಗಳೂರು ತಾಲೂಕಿನ ಕುಳವೂರು ಗ್ರಾಮದ ತಿಮಿರಿ ತಜಂಕ್ ಎಂಬಲ್ಲಿ ಶುಕ್ರವಾರ ನಡೆದಿದೆ. ಮೋನಪ್ಪ ಪೂಜಾರಿ(58)ಮೃತಪಟ್ಟವರು ಮೃತರು ಕೃಷಿಕರಾಗಿದ್ದು, ಜತೆಯಲ್ಲಿ ಮೇಸ್ತ್ರಿ ಕೆಲಸವನ್ನೂ ಮಾಡುತ್ತಿದ್ದರು.

20200410_161250ಲಾಕ್ ಡೌನ್ ಹಿನ್ನೆಲೆಯಲ್ಲಿ ಮೇಸ್ತ್ರಿ ಕೆಲಸ ಇಲ್ಲದಿರುವುದರಿಂದ, ತಮ್ಮ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮನೆ ಮಂದಿ ನೋಡು ನೋಡುತ್ತಿದ್ದಂತೆ ಏಕಾಏಕಿ ಕುಸಿದು ಬಿದ್ದ ಮೋನಪ್ಪ ಅವರು ಮೃತಪಟ್ಟಿದ್ದಾರೆ. ಇವರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

By suddi9

Leave a Reply

Your email address will not be published. Required fields are marked *