ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಲಾಕ್‌ ಡೌನ್‌ ಇರುವುದರಿಂದ ಏ.14 ರಂದು ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.10svp2ep

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡಾ. ಬಿ.ಆರ್‌.ಅಂಬೇಡ್ಕರ್‌ ಜಯಂತಿ ಆಚರಣೆ ಕುರಿತು ಚರ್ಚಿಸಲು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಏ.14 ರ ಬೆಳಿಗ್ಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗಳಲ್ಲಿ ಅಂಬೇಡ್ಕರ್‌ ಜಯಂತಿ ಆಚರಿಸಿ, 9.30 ಕ್ಕೆ ಮಿನಿ ವಿಧಾನ ಸೌಧದ ಮುಂದೆ ಅಂಬೇಡ್ಕರ್‌ ಉದ್ಯಾನದಲ್ಲಿ ಸೇರಬೇಕು. ಅಲ್ಲಿ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್‌, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸಮೂರ್ತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ದಲಿತ ಸಂಘನೆಗಳ ಮುಖಂಡರು ಹಾಗೂ ಪಟ್ಟಣದ ನಾಗರಿಕರು ಸಭೆಯಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *