ಕೋಲಾರ: ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶಗಳಲ್ಲಿನ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದವರು ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದು, ಇವರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.15kolar6

ಮಂಗಳವಾರಿ ಡಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಸದರಿ ಹೋಬಳಿಗಳಲ್ಲಿ ಮನೆಗಳನ್ನು ಬಾಡಿಗೆಗೆ ಪಡೆದು ಕಾರ್ಮಿಕರು ವಾಸವಾಗಿದ್ದಾರೆ. . ಇವರು ಗುಂಪು ಗುಂಪಾಗಿ ವಾಸ ಮಾಡುತ್ತಿರುವುದರಿಂದ ಕೋವಿಡ್-19ರ ಸೋಂಕು ಹರಡುವ ಭೀತಿ ಇದೆ, ಆದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅವರಿಗೆ ಸೂಕ್ತ ವಸತಿ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಕುರ್ಕಿ, ಖಾಜಿಕಲ್ಲಹಳ್ಳಿ, ನರಸಾಪುರ, ಬೆಳ್ಳೂರು, ಅಚ್ಚಟ್ನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಹೊರರಾಜ್ಯದ ಕಾರ್ಮಿಕರು ಸಣ್ಣಪುಟ್ಟ ಮನೆಗಳಲ್ಲಿ ಒಟ್ಟೊಟ್ಟಿಗೆ ವಾಸ ಮಾಡುತ್ತಿದ್ದಾರೆ. ಈಗಾಗಲೇ ನರಸಾಪುರದ ಗಡಿಭಾಗದ ಬೈಲು ನರಸಾಪುರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಈ ಭಾಗದಲ್ಲೂ ಓಡಾಡಿರುವುದರಿಂದ ಜನತೆಯಲ್ಲಿ ಆತಂಕ ಮೂಡಿಸಿದೆ, ಈ ಕಾರ್ಮಿಕರನ್ನು ಸರ್ಕಾರಿ ಅಥವಾ ಖಾಸಗಿ ಶಾಲೆಗಳಲಿ ಪ್ರತ್ಯೇಕವಾಗಿ ವಾಸ ಮಾಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸುಮಾರು 8 ಸಾವಿರಕ್ಕೂ ಹೆಚ್ಚು ಮಂದಿ ವಾಸ ಮಾಡುತ್ತಿರುವ ಪೈಕಿ ಸಾಕಷ್ಟು ಮಂದಿ ವೇಮಗಲ್ ಮತ್ತು ನರಸಾಪುರ ಕೈಗಾರಿಕೆಗಳಲ್ಲಿ ಓಡಾಟ ಮಾಡುತ್ತಿದ್ದಾರೆ. ಇವರಲ್ಲಿ ಒಬ್ಬರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದರೂ ಸಾಕಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ.
ಮೇ.3 ರವರೆಗೂ ಲಾಕ್‍ಡೌನ್ ಮುಂದುವರೆದಿದ್ದು ಕೈಗಾರಿಕೆಗಳಿಂದ ಬಳಸಿಕೊಳ್ಳಬಹುದಾದ ಸಿಎಸ್‍ಆರ್ ಅನುದಾನದಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಮತ್ತು ಜಿಲ್ಲಾಡಳಿತದಿಂದ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಈ ಕುರಿತು ಪಿಡಿಒಗಳು ಆರ್‍ಐ, ಎಸ್‍ಐ, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪರಿಶೀಲನೆ ನಡೆಸಿ ಇವರಿಗೆ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಡಿಸಿ ಸಿ.ಸತ್ಯಭಾಮ ಅವರು, ಶೀಘ್ರದಲ್ಲೇ ಕೈಗಾರಿಕೋದ್ಯಮಿಗಳ ಸಭೆ ಕರೆದು ಹೊರರಾಜ್ಯಗಳ ಪೌರಕಾರ್ಮಿಕರ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಲಾಗುವುದು. ಹಾಗೂ ತಾಪಂ ಇಒ ಹಾಗೂ ಆರೋಗ್ಯ ಅಧಿಕಾರಿಗಳನ್ನು ಕೈಗಾರಿಕಾ ಪ್ರದೇಶಗಳಿಗೆ ಕಳುಹಿಸಿ, ಸಮಸ್ಯೆ ಆಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಉಪಾಧ್ಯಕ್ಷ ಹರೀಶ್‍ಗೌಡ, ಮುಖಂಡ ವಿಶ್ವನಾಥ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *