ಬಂಟ್ವಾಳ: ಬಂಟ್ವಾಳದಲ್ಲಿ ಆದಿತ್ಯವಾರ ಕೊರೊನಾ ಪಾಸಿಟಿವ್ ನಿಂದ ಮೃತಪಟ್ಟ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 ಕೊರೊನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಸಂಬಂಧಿಸಿದ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಕೊರೊನಾ ಹರಡುವಿಕೆ ಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಠಾಣೆಯ ಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ತಾಲೂಕು ವೈದ್ಯಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ತವ್ಯಕ್ಕೆ ಅಡ್ಡಿ ಕೇಸ್ : 
ಪುರಸಭಾ ವ್ಯಾಪ್ತಿಯ  ಬಾರೆಕಾಡು ಎಂಬಲ್ಲಿ ಸೋಮವಾರ ನೋಡಲ್ ಅಧಿಕಾರಿಣಿ ಯಾಸ್ಮೀನ್ ಮತ್ತವರ ತಂಡದ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಅಧಿಕಾರಿಣಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *