ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಬುಧವಾರ ಸೀಲ್ ಡೌನ್ ಗೊಳಗಾದ ಬಂಟ್ವಾಳ ಪೇಟೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಹಾಗೂ ಕೈಗೊಳ್ಳಲಾದ ಕ್ರಮಗಳ ಬಗ್ಗೆ  ಪರಾಮರ್ಶಿಸಿದರು. ಈ ವೇಳೆ ಪುರಸಭೆಯ ಸಹಾಯವಾಣಿಗೂ ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. IMG-20200422-WA0032
ಈಗಾಗಲೇ ಬಂಟ್ವಾಳ ಪೇಟೆಯ ಹೃದಯಭಾಗದಲ್ಲಿರುವ ಪ್ರದೇಶದಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶದ ಸುತ್ತಮುತ್ತಲು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ. ಈ ಜಾಗದಲ್ಲಿವಾಸಿಸಿರುವವರಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರವನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿದೆ. ಇದರ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದರು. ಇದೇ ಸಂದರ್ಭ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ರೇಶನ್ ಅಂಗಡಿಗಳನ್ನು ಅದರ ಹೊರಗಿನ ಭಾಗಕ್ಕೆ ಸ್ಥಳಾಂತರಗೊಳಿಸುವಂತೆ ಅವರು ಸೂಚನೆ ನೀಡಿದರು. IMG-20200422-WA0033
 ಪ್ರೊಬೆಶನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ,ಕಂದಾಯ, ಆರೋಗ್ಯ,  ಪೊಲೀಸ್ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

By suddi9

Leave a Reply

Your email address will not be published. Required fields are marked *