ಬಂಟ್ವಾಳ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಿದ ಕಾರಣ, ಗ್ರಾಮಮಟ್ಟದಲ್ಲಿ ರಚನೆಯಾದ ಟಾಸ್ಕ್ ಫೋರ್ಸ್ ಚಟುವಟಿಕೆಗಳ ಪ್ರಗತಿಯನ್ನು ಪರಿಶೀಲಿಸಲು ಗುರುವಾರ ಬಂಟ್ವಾಳ ಕ್ಷೇತ್ರದ ನಾಲ್ಕು ಗ್ರಾಮ ಪಂಚಾಯತ್ ಗಳಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಭೇಟಿ ನೀಡಿದರು.IMG-20200430-WA0040

ಅಮ್ಟಾಡಿ,ಅರಳ,ರಾಯಿ,ಸಂಗಬೆಟ್ಟು ಗ್ರಾಪಂಗಳಿಗೆ  ತೆರಳಿ, ಅಲ್ಲಿನ ಕಾರ್ಯವೈಖರಿಯನ್ನು ವೀಕ್ಷಿಸಿ, ಸಮಸ್ಯೆಗಳನ್ನು ಆಲಿಸಿದರು. ಅವುಗಳಿಗೆ ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

IMG-20200430-WA0039ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸ್ಥಾಯಿಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ,  ಜಿಪಂಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ತುಂಗಪ್ಪ ಬಂಗೇರ  ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ಹರೀಶ್,  ಅರಳ   ಗ್ರಾ.ಪಂ.ಅಧ್ಯಕ್ಷೆ ತುಂಗಮ್ಮ, ರಾಯಿ  ಗ್ರಾ.ಪಂ.ಅಧ್ಯಕ್ಷ ದಯಾನಂದ ಸಪಲ್ಯ, ಉಪಾಧ್ಯಕ್ಷೆ    ಪುಪ್ಪಾಲತಾ ಸಂಗಬೆಟ್ಟು ಗ್ರಾಪಂ ಅಧ್ಯಕ್ಷೆ ಗುಲಾಬಿ ಶೆಟ್ಟಿ,ಉಪಾಧ್ಯಕ್ಷ ಸತೀಶ್ ಪೂಜಾರಿ,ತಾಪಂ ಸದಸ್ಯ ಪ್ರಭಾಕರ ಪ್ರಭು ಸಹಿತ ಆಯಾ ಗ್ರಾಪಂಗಳ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆ ಯರು, ಆರೋಗ್ಯ ಇಲಾಖೆ ಕಾರ್ಯಕರ್ತರು ಉಪಸ್ಥಿತರಿದ್ದರು. ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಅವರ ವಯಕ್ತಿಕ ನೆಲೆಯಲ್ಲಿ ಅಶಕ್ತ ಕುಟುಂಬಗಳಿಗೆ ಅಕ್ಕಿಯನ್ನು ವಿತರಿಸಲಾಯಿತು.

By suddi9

Leave a Reply

Your email address will not be published. Required fields are marked *