ಶ್ರೀನಿವಾಸಪುರ: ಪಟ್ಟಣದಲ್ಲಿ ಬುದ್ಧ ಪೂರ್ಣಿಮಾ ಪ್ರಯುಕ್ತ ಶಾಸಕ ಕೆ.ಆರ್.ರಮೇಶ್ ಕುಮಾರ್ ಬುದ್ಧನ ಭಾವ ಚಿತ್ರ ಹಾಗೂ ಅಂಬೇಡಕ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ತಹಶೀಲ್ದಾರ್ ಎಸ್.ಎಸ್.ಎಂ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ದಲಿತ ಬುದ್ಧ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ವರ್ತನಹಳ್ಳಿ ವೆಂಕಟೇಶ್, ಮುಖಂಡರಾದ ರಾಮಾಜನಮ್ಮ, ರಾಮಕೃಷ್ಣ, ವೆಂಕಟೇಶ್, ನರಸಿಂಹ, ಕೆ.ಶ್ರೀನಿವಾಸ್, ಈರಪ್ಪ ಇದ್ದರು.
ಬುದ್ಧ ಪೂರ್ಣಿಮೆ:
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಬುದ್ಧ ಪೂರ್ಣಿಮಾ ಆಚರಿಸಲಾಯಿತು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಬುದ್ಧನ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು ಉಪ ತಹಶೀಲ್ದಾರ್ ಮಲ್ಲೇಶ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್ ಇದ್ದರು.
