ಬಂಟ್ವಾಳ: ವಿಶ್ವ ದಾದಿಯರ ದಿನಾಚರಣೆ ಪ್ರಯುಕ್ತ ಮಂಗಳವಾರ ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಬಸ್ ನಿಲ್ದಾಣದಲ್ಲಿ ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖಾ ವತಿಯಿಂದ ಬಂಟ್ವಾಳ ತಾಲೂಕಿನ ದಾದಿಯರಿಗೆ ಹೂ ಹಾಗೂ ಸಿಹಿತಿಂಡಿ ಹಂಚುವ ಮೂಲಕ ಆಚರಿಸಿ  ಶುಭ  ಕೋರಲಾಯಿತು.

IMG-20200512-WA0047
ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್ ಹಾಗೂ ಐ.ಪಿ.ಎಸ್.ರಂಜಿತ್ ಬಂಡಾರು, ಬಂಟ್ವಾಳ ಡಿ.ವೈ.ಎಸ್.ಪಿ.ವೆಲಂಟೈನ್ ಡಿ.ಸೋಜ ಅವರು ಶುಭಾಶಯ ಕೋರಿದರು.ಬಿಹಾರ ಮೂಲದ ಸುಮಾರು 624 ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವುಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ  ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಗೆಂದುಬಿ‌ .ಸಿ. ರೋಡು ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣಕ್ಕೆ ಬಂದಿದ್ದ ದಾದಿಯರಿಗೆ ಹೂ, ಸಿಹಿ.ತಿಂಡಿ ನೀಡಿ ದಾದಿಯರ ದಿನಾಚರಣೆಯ ಶುಭಾಶಯ ಕೋರಲಾಯಿತು.

ಇದೇ ವೇಳೆಸುಮಾರು 17 ಸರಕಾರಿ ಬಸ್ ಗಳಲ್ಲಿ ಬಿಹಾರ ಮೂಲದ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲಾಯಿತು.ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ.ನಾಗಾರಾಜ್, ಸಬ್ ಇನ್ಸ್ ಪೆಕ್ಟರ್ ಗಳಾದ ಅವಿನಾಶ್ ,ಪ್ರಸನ್ನ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *