ಬಂಟ್ವಾಳ: ಕೊರೋನ ಸೋಂಕುವಿನ ಹಿನ್ನಲೆಯಲ್ಲಿ ಲಾಕ್ ಡೌನ್ ಮತ್ತು ಸೀಲ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ನಿಟ್ಟಿನಲ್ಲಿ ಬಂಟ್ವಾಳ ನಗರ ವಾಸಿಗಳಿಂದ ಸಂಗ್ರಹಿಸುವ ವಿವಿಧ ಶುಲ್ಕ,ತೆರಿಗೆಯನ್ನು ಮನ್ನಾ ಮಾಡುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನ ನಿಯೋಗ ಶುಕ್ರವಾ ಪುರಸಭೆಯ ಮುಖ್ಯಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಬಂಟ್ವಾಳ ಕಸ್ಬಾ ಗ್ರಾಮದ ಬಂಟ್ವಾಳ ಪೇಟೆಯಲ್ಲಿ ಕೊರೋನ ಸೋಂಕು ಪತ್ತೆಯಾದ ಬಳಿಕ ಸುದೀರ್ಘ ಅವಧಿಯ ಕಾಲ ನಗರವಾಸಿಗಳು ಲಾಕ್ ಡೌನ್ ಮತ್ತು ಸೀಲ್ ಡೌನ್ ನಲ್ಲಿ ಸಿಲುಕಿ ಸಂಕಷ್ಟಕ್ಕೀಡಾಗಿದ್ದಾರೆ. ಮುಇಲಭೂತ ಸೌಲಭ್ಯಗಳು ದೊರುಕಿಲ್ಲ,ಜನರಿಗೆ ದಿನನಿತ್ಯದ ಬದುಕು ನಿರ್ವಹಣೆಗು ಕಷ್ಟವಾಗಿರುವುದರಿಂದ ಇಲ್ಲಿನ ನಿವಾಸಿಗಳ ಕಟ್ಟಡ,ಮನೆ ತೆರಿಗೆ,ತ್ಯಾಜ್ಯ,ನೀರಿನ,ವಿದ್ಯುತ್ ಶುಲ್ಕವನ್ನು ಮನ್ನಾ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಬಂಟ್ವಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ,ಪುರಸಭಾ ಸದಸ್ಯರಾದ ಜನಾರ್ದನ ಚೆಂಡ್ತಿಮಾರ್ , ಗಂಗಾಧರ ಪೂಜಾರಿ ಉಪಸ್ಥಿತರಿದ್ದರು.
