ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ ಪ್ರಶಸ್ತಿಗಾಗಿ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ.ಕ., ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರ ವಯಸ್ಸು 45ಕ್ಕೆ ಮೀರಿರಬಾರದು. ಗ್ರಾಮೀಣ, ಮಾನವೀಯ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. 2019 ನೇ ಸಾಲಿನ ಪ್ರಶಸ್ತಿಗೆ  ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ 2019ರ ಜನವರಿ 1ರಿಂದ ಡಿಸೆಂಬರ್ 31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ವರದಿಯ ನಾಲ್ಕು  ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು.ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು 2020 ಮೇ 30 ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:  ಪ್ರಧಾನ ಕಾರ್ಯದರ್ಶಿ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಉರ್ವಮಾರ್ಕೆಟ್ ಮಂಗಳೂರು -6 ಇಲ್ಲಿಗೆ ಕಳುಹಿಸುವಂತೆ  ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *