ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಟ್ಲ ಯೋಜನಾ ಕಛೇರಿ ವ್ಯಾಪ್ತಿಯ 20 ಮಂದಿ ನವಜೀವನ ಸಮಿತಿ ಸದಸ್ಯರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.SHV_8005

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್, ವಿಟ್ಲ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕೃಷ್ಣಯ್ಯ ಬಳ್ಳಾಲ್, ಸದಸ್ಯ ನಟೇಶ್ ವಿಟ್ಲ, ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ಜಯಂತಿ ಪೂಜಾರಿ, ಯೋಜನಾಧಿಕಾರಿ ಮೋಹನ್, ಜ.ಜಾಗೃತಿ ಯೋಜನಾಧಿಕಾರಿ ಚೆನ್ನಪ್ಪ ಗೌಡ, ಮೇಲ್ವಿಚಾರಕ ರಮೇಶ್ ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *