ಬಂಟ್ವಾಳ: ಕನಾ೯ಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಆತೀಕ್ ಇವರು ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ ಪಂಚಾಯತ್ ಕಛೇರಿಗೆ ಭೇಟಿ ನೀಡಿದರು.ಈ ಸಂದರ್ಭ ನೆರೇಗಾ ಯೋಜನೆಯಲ್ಲಿ ಹಾಗೂ 14ನೇ ಹಣಕಾಸು ಯೋಜನೆಯಡಿ ಅಭಿವೃದ್ಧಿಯಾದ ವಿವಿಧ ಪ್ರದೇಶ ಹಾಗೂ ಸಜಿಪನಡು ಗ್ರಾಮದ ಕಂಚಿನಡ್ಕ ಪದವು ಹಿಂದೂ ರುದ್ರ ಭೂಮಿಗೆ ಹಾಗೂ ಸಜಿಪನಡು ಗ್ರಾಮದ ನಳ್ಳಿ ನೀರು ಸಂಪಕ೯ ಹೊಂದಿದ ಕೆಲ ಮನೆಗಳಿಗೂ ಅವರು ಭೇಟಿ ನೀಡಿದರು. 
ಗ್ರಾಮ ಪಂಚಾಯತ್ ನಿಂದಾದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿಯ ಕುರಿತಾಗಿಯು ಕನಾ೯ಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಆತೀಕ್ ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ.ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಇಂಜಿನಿಯರ್ ನರೇಂದ್ರ ಬಾಬು , ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ನಾಸೀರ್, ಸದಸ್ಯ ಎಸ್.ಎನ್ ಅಬ್ದುಲ್ ರಹಿಮಾನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
