ಬಂಟ್ವಾಳ: ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ನಿಯಮಿತ ಸರಪಾಡಿ ಇದರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ಗೌರವಧನ ವಿತರಿಸಲಾಯಿತು. ಬ್ಯಾಂಕ್ ನ ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಆಶಾ ಕಾರ್ಯಕರ್ತೆಯರಿಗೆ ಗೌರವಧನ ವಿತರಿಸಿದರು. 
ನಂತರ ಮಾತನಾಡಿದ ಅವರು ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ಅವರನ್ನು ಪ್ರೋತ್ಸಾಹಿಸಿ ಗೌರವಧನ ನೀಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಕೊರೋನಾ ಮಹಾಮಾರಿಯ ವಿರುದ್ದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯವನ್ನೇ ಲೆಕ್ಕಿಸದೆ ನಮ್ಮೆಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಅಭಿನಂದನೀಯ. ಈ ಸಂಸ್ಥೆಯಿಂದ ಇನ್ನಷ್ಟು ಅಭಿವೃದ್ಧಿ ಹೊಂದಿ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಕೆ. ರಾಧಕೃಷ್ಣ ಮಯ್ಯ, ಉಪಾಧ್ಯಕ್ಷ ವಿಶ್ವನಾಥ ನಾಯ್ಕ ಕಾನೆಕೋಡಿ, ನಿದೇರ್ಶಕರಾದ ತಿಲಕ್ ಬಂಗೇರಾ, ದಯಾನಂದ ಶೆಟ್ಟಿ ಮುನ್ನಲಾಯಿ, ಜೋಕಿಂ ಪಿಂಟೋ, ನಿಶಾಂತ್ ಶೆಟ್ಟಿ, ನಾಣ್ಯಪ್ಪ ಪೂಜಾರಿ, ಕೃಷ್ಣ ಶಾಂತಿ, ಪ್ರೇಮ ವಿ. ಆಳ್ವಾ, ವಸಂತಿ ಗೌಡ, ಕೆ.ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.ನಿರ್ದೇಶಕ ಧನಂಜಯ ಶೆಟ್ಟಿ ಸ್ವಾಗತಿಸಿದರು, ಮುಖ್ಯ ಕಾರ್ಯನಿವಾಹಣಾಧಿಕಾರಿ ಎಚ್.ಸುಧಾಕರ ಶೆಟ್ಟಿ ವಂದಿಸಿದರು.
