ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದ ಈ ಸಂದರ್ಭದಲ್ಲಿ ಎಲ್ಲರೂ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬದಲು ಏರಿಕೆ ಮಾಡುವುದು ಸರಿಯಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷರು ಅಡ್ವೊಕೇಟ್ ತಾಹಿರ್ ಹುಸೇನ್ ಹೇಳಿದ್ದಾರೆ.FRAME_COLLAGE1589705504538
ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.‘ಕೋವಿಡ್–19 ವಿರುದ್ಧದ ಹೋರಾಟವು ಕೋಟ್ಯಂತರ ಸಹೋದರ ಸಹೋದರಿಯರನ್ನು ಆರ್ಥಿಕವಾಗಿ ಕಷ್ಟಕ್ಕೀಡುಮಾಡಿದೆ. ಇಂತಹ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡುವ ಬದಲು ಪೆಟ್ರೋಲ್, ಡೀಸೆಲ್ ದರವನ್ನು ಕ್ರಮವಾಗಿ ₹10 ಹಾಗೂ ₹13ರಷ್ಟು ಹೆಚ್ಚಿಸುವ ನಿರ್ಧಾರ ಸರಿಯಲ್ಲ. ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅವರು ಆಗ್ರಹಿಸಿದರು.

By suddi9

Leave a Reply

Your email address will not be published. Required fields are marked *