ಬಂಟ್ವಾಳ : ಬಂಟ್ವಾಳ ತಾಲೂಕು ವಾಮದಪದವು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಸಂಘದ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್-19 ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಮತ್ತು ದಿನ ಬಳಕೆಯ ವಸ್ತುಗಳ ಕಿಟ್ ವಿತರಣೆ ಹಾಗೂ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.

1206pkt2
ಸಂಘದ ಅಧ್ಯಕ್ಷ ಕಮಲ್ ಶೆಟ್ಟಿ ಬೊಳ್ಳಾಜೆ ಇವರು ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಪೂಜಾರಿ, ನಿರ್ದೇಶಕರಾದ ಯಶೋಧರ ಶೆಟ್ಟಿ, ಧರ್ಣಪ್ಪ ನಾಯ್ಕ, ಗೋಪಾಲಕೃಷ್ಣ ಚೌಟ, ನಾಗರಾಜ ಶೆಟ್ಟಿ, ಸು„ೀರ್ ಕುಮಾರ್, ಕೊರಗು, ವಿವೇಕಾನಂದ ಪೂಜಾರಿ, ಗೋಪಾಲಕೃಷ್ಣ ಶೆಟ್ಟಿ, ವೆಂಕಟೇಶ ಭಟ್, ಆಶಾ ಜಯರಾಮ ಶೆಟ್ಟಿ, ರೋಹಿಣಿ, ಸಂಘದ ಮುಖ್ಯಕಾರ್ಯನಿರ್ವಹಣಾ„ಕಾರಿ ಅಲ್ಬರ್ಟ್ ಡಿಸೋಜ ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *