ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜೂನ್ 20ರಂದು ಶನಿವಾರ ಬೆಳಗ್ಗೆ 10:00 ಗಂಟೆಗೆ ನಗರದ ಲೇಡಿಹೀಲ್ ನ ಪತ್ರಿಕಾ ಭವನದ ಬಳಿ ನಡೆಯಲಿದೆ.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ , ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ. ವೈ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕ್ಕಳನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇ ಗೌಡ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ , ತೋಟಗಾರಿಕಾ ಉಪನಿರ್ದೆಶಕ ಎಚ್. ಆರ್. ನಾಯ್ಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
