ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿನ ಸಾಂಬಾ ಬಳಿ ಪಾಕಿಸ್ತಾನ ಸೈನಿಕರು ಬುಧವಾರ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಗಡಿಯಲ್ಲಿ ಸೇನೆಯ ಔಟ್‌ಪೋಸ್ಟ್‌ಗಳು ಮತ್ತು ಗಡಿ ಗ್ರಾಮಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 25 ಮಂದಿಗೆ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಪಾಕಿಸ್ತಾನ ಸೈನಿಕರು ಸಾಂಬಾದ ಚಿಲ್ಯಾರಿ ಗ್ರಾಮದ ಬಳಿ ಶೆಲ್ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಕ್ ಸೈನಿಕರ ಗುಂಡಿನ ದಾಳಿಗೆ ಬಿಎಸ್‌ಎಫ್ ಯೋಧರು ಸಹ ಪ್ರತಿದಾಳಿ ನಡೆಸಿದ್ದಾರೆ. ಪಾಕ್ ಗುಂಡಿನ ದಾಳಿಯಿಂದಾಗಿ ಗಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

pak

By suddi9

Leave a Reply

Your email address will not be published. Required fields are marked *