ಬಂಟ್ವಾಳ: ಬಿ.ಸಿ.ರೋಡಿಗೆ ಸಮೀಪದ ಬೆಂಜನಪದವಿನಲ್ಲಿ ಬುಧವಾರ ರಾತ್ರಿ ದ್ವಿಚಕ್ರಕ್ಕೆ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಯುವತಿಯೋರ್ವಳು ಸಾವನ್ನಪ್ಪಿದರೆ,ಮತ್ತೋರ್ವಳು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೃತರನ್ನು ಬಂಟ್ವಾಳ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಉದ್ಯೋಗಿಯಾಗಿ ಶ್ಯಾಮಲಾ (23) ಎಂದು ಗುರುತಿಸಲಾಗಿದೆ. ಯುವತಿ ಗಂಭೀರ ಇವರ ಸಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ್ದಾರೆ.
ಇವರ ಸ್ನೇಹಿತೆ ಹರ್ಷಿತಾ ಗಾಯಗೊಂಡು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟ ಶ್ಯಾಮಲಾ ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ ನಂತರ, ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ತೆರಳಿ, ಮನೆಗೆ ಮರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬೆಂಜನಪದವು ದಿವ್ಯಜ್ಯೋತಿ ಎಂಬ ಅಂಗಡಿ ಎದುರು ಸ್ವಿಫ್ಟ್ ಕಾರೊಂದು ಎದುರು ಬಂದು ಸ್ಕೂಟರ್ ಗೆ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಮಗುಚಿಬಿದ್ದು, ಕಾರು, ಸವಾರರ ಮೇಲೆ ಹರಿದುಹೋಗಿದೆ.
ತೀವ್ರ ಗಾಯಗೊಂಡ ಇಬ್ಬರನ್ನೂ ತುಂಬೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಶ್ಯಾಮಲಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು,ಅವರೊಂದಿಗಿದ್ದ ಹರ್ಷಿತಾ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರು ಸ್ಕೂಟರ್ ನಲ್ಲಿ ಸಹ ಸವಾರರಾಗಿದ್ದರು ಎಂದು ಬಂಟ್ವಾಳ ಟ್ರಾಫಿಕ್ ಎಸ್.ಐ. ರಾಜೇಶ್ ತಿಳಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
