ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 6.6 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಬಂಟ್ವಾಳ ಕ್ಷೇತ್ರದ ಪೆರಾಜೆ, ನೆಟ್ಲಮುಡ್ನೂರು, ಮಂಚಿ, ಮಾಣಿ, ಅನಂತಾಡಿ ಗ್ರಾಮಗಳಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಿದರು.

ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಅನುದಾನದಲ್ಲಿ 1.53 ಕೋ.ರೂ, ಪೆರಾಜೆ ಗ್ರಾಪಂನಲ್ಲಿ 66 ಲಕ್ಷ ರೂ, ನೆಟ್ಲಮುಡ್ನೂರು ಗ್ರಾಮದಲ್ಲಿ 1.25 ಕೋಟಿ ರೂ, ಮಂಚಿ ಗ್ರಾಮದಲ್ಲಿ 88.5 ಕೋಟಿ ರೂ, ಅನಂತಾಡಿ ಗ್ರಾಮದಲ್ಲಿ 2.24 ಕೋಟಿ ರೂ ಸೇರಿದಂತೆ ಒಟ್ಟು 6.6 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 
ದ.ಕ.ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ,ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ಆಯಾಯ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು,ಗ್ರಾಪಂ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ಎಂಜಿನಿಯರುಗಳು, ಸ್ಥಳೀಯ ಮುಂದಾಳುಗಳು ಈ ವೇಳೆ ಉಪಸ್ಥಿತರಿದ್ದರು.
