ಉಡುಪಿ :ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಇಂದು ಸಂಜೆ ಉಡುಪಿ ನಗರದಲ್ಲಿರುವ ಚಮ್ಮಾರರಿಗೆ ಮತ್ತು ಬೀದಿ ಬದಿಯ ವ್ಯಾಪಾರಸ್ಥರಿಗೆ ಕೊರೊನಾ ತಡೆಗಟ್ಟುವ ಸಲುವಾಗಿ ಮರುಬಳಕೆ ಮಾಡಬಹುದಾದಂತಹ ಬಟ್ಟೆಯ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಬೂನು ಒಳಗೊಂಡ ಸೇಫ್ಟಿ ಕಿಟ್ ವಿತರಿಸಿ ಜಾಗೃತಿ ಮೂಡಿಸಲಾಯಿತು.FB_IMG_1593265927231
ಮಾಸ್ಕ್ ಧಾರಣೆಯಿಂದ ಆಗುವಂತಹ ಲಾಭಗಳು, ಸ್ಯಾನಿಟೈಸರ್ ಬಳಕೆಯ ವಿಧಾನ ಮತ್ತು ಬರುವ ಗ್ರಾಹಕರಲ್ಲಿಯೂ ಅರಿವು ಮೂಡಿಸುವಂತೆ ನಾವು ಅವರಲ್ಲಿ ವಿನಂತಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್, ನಾಗರಾಜ್ ಭಂಡಾರ್ಕಾರ್, ವೀಕ್ಷಿತ್ ಉಪಸ್ಥಿತರಿದ್ದರು.
ವೋಕಲ್ ಫಾರ್ ಲೋಕಲ್ ಅಭಿಯಾನದ ಅಂಗವಾಗಿ ಸ್ಥಳೀಯರಿಗೆ ಬೆಂಬಲಿಸುವ ಸಲುವಾಗಿ ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಸಲು ಸ್ಥಳೀಯ ಗ್ರಾಮೀಣ ಮಹಿಳೆಗೆ ನಾವು ಸೂಚಿಸಿದ್ದೆವು. ಇಂದು ನಾವು ವಿತರಿಸಿದ ಎಲ್ಲಾ ಮಾಸ್ಕ್ ಗಳನ್ನು ಅವರೇ ತಯಾರಿಸಿದ್ದರು ಇನ್ನು ಮುಂದಿನ ದಿನಗಳಲ್ಲಿ ಅವರಲ್ಲಿಯೇ ಮಾಸ್ಕ್ ತಯಾರಿಸಲು ಅವರಿಗೆ ಭರವಸೆ ನೀಡಿದ್ದೇವೆ.

By suddi9

Leave a Reply

Your email address will not be published. Required fields are marked *