ಬಂಟ್ವಾಳ: ಕರಿಯಂಗಳ ಗ್ರಾಮದ ಬಡಕಬೈಲ್ ಗನೆಮಾರ್ ಎಂಬಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರ ಅನುದಾನ ದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಮಾಜಿ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರು ಶಿಲಾನ್ಯಾಸ ನೆರೆವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯಇಬ್ರಾಹಿಂ ನವಾಝ್, ಅಮ್ಮುoಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲತ, ಕರಿಯಂಗಳ ಗ್ರಾಪಂನ ಮಾಜಿ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ವಲಯ ಕಾಂಗ್ರೆಸ್ ಚಂದ್ರಹಾಸ ಪಲ್ಲಿಪಾಡಿ, ಅಮ್ಮುoಜೆ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್, ರಮ್ಲಾನ್ , ಬಶೀರ್ ಮೊಹಮ್ಮದ್ ಕರಿಯಂಗಳ , ಉಮೇಶ್ ಕರಿಯಂಗಳ, ಗಿತೇಶ್ ಬಡಕಬೈಲ್, ಮಂಜುನಾಥ್ ಬಡಕಬೈಲ್, ಬಿ ಎಸ್ ಮೊಹಮ್ಮದ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.
