ಬಂಟ್ವಾಳ: ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡು ಕೈಕಂಬದಿಂದ ಬಿ.ಸಿ.ರೋಡು ಜಂಕ್ಷನ್ ವರೆಗೆ ಪ್ರತಿಭಟನಾ ಪಾದಯಾತ್ರೆಯು ಸೋಮವಾರ ನಡೆಯಿತು.
ಬಿ.ಸಿ.ರೋಡಿನ ಮೇಲ್ಸ್ ತುವೆಯಡಿಯಲ್ಲಿ ಪಾದಯಾತ್ರೆ ಸಂಪನ್ನಗೊಂಡ ಬಳಿಕ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ,ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ತೈಲ ಬೆಲೆ ೧೪೦ ಡಾಲರ್ ಇದ್ದಾಗ, ಪೆಟ್ರೋಲ್, ಡಿಸೇಲ್ ಬೆಲೆ ೬೦ ರೂ.ಗಳಿಗಿಂತಲೂ ಕಡಿಮೆ ಇತ್ತು. ಆದರೆ ಈಗ ೪೦ ಡಾಲರ್ ಗೆ ತಲುಪಿದರೂ, ಕೇಂದ್ರ ಸರ್ಕಾರ ಬೆಲೆಯನ್ನು ಗಗನಕ್ಕೇರಿಸುತ್ತಿದೆ. ಇದರಿಂದಾಗಿ ದಿನಬಳಕೆಯ ವಸ್ತುಗಳಿಗೂ ಬೆಲೆ ಏರಿಕೆಯಾಗುವ ಅಪಾಯ ಎದುರಾಗಿದೆ ಎಂದು ಆರೋಪಿಸಿದರು.
ಪಾದಯಾತ್ರೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ಖಂಡಿಸಿ ಜೀಪಿಗೆ ಹಗ್ಗ ಕಟ್ಟಿ ಏಳೆಯಲಾಯಿತು. ಬಳಿಕ ತಹಶೀಲ್ದಾರ್ ಮೂಲಕ ಬೆಲೆ ಇಳಿಕೆಗೆ ಆಗ್ರಹಿಸಿ ಸರಕಾರಕ್ಕೆ ಮನವಿ ನೀಡಲಾಯಿತು.ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಸದಾಶಿವ ಬಂಗೇರ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸಂಜೀವ ಪೂಜಾರಿ, ಮಹಮ್ಮದ್ ನಂದಾವರ,ವೆಂಕಪ್ಪ ಪೂಜಾರಿ ಪುರಸಭೆಯ ಕಾಂಗ್ರೆಸ್ ಸದಸ್ಯರು,ತಾಪಂ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.



