ಬಂಟ್ವಾಳ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದತ್ತ ಸಾಗಿಸುತ್ತಿದ್ದ ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಣೆಮಂಗಳೂರು ಸಮೀಪದ ಶಂಭೂರು ಚಚ್೯ ಬಳಿ ಸೋಮವಾರ ನಡೆದಿದ್ದು,ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಶಂಭೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆ ಯ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.ಪರಿಣಾಮವಾಗಿ ಅಕ್ಷಿತ್ ಎಂಬ ವಿದ್ಯಾರ್ಥಿ ಗಂಭೀರ ಸ್ವರೂಪದ ಗಾಯಗೊಂಡಿದ್ದು,ಇವರನ್ನು ಮಂಗಳೂಎಇನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.ಉಳಿದಂತೆ ಚಾಲಕ ಸಹಿತ ಇತರ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟಗಾಯಗೊಂಡಿದ್ದು,ಈ ವಿದ್ಯಾರ್ಥಿಗಳನ್ನು ಸ್ಥಳೀಯರು ತಕ್ಷಣ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ, ಅಲ್ಲಿ ಪ್ರಥಮ ಚಿಕಿತ್ಸೆಕೊಡಿಸಿ ಬಳಿಕ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ.ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮಕೈಗೊಂಡರು.
