ರವಿವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಅಲ್ಲಿ ತಪಾಸಣೆಗೊಳಪಡಿಸಿದಾಗ ಕೊರೋನ ಸೋಂಕು ಪತ್ತೆಯಾಗಿತ್ತು.ನಂತರ ಇವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು.ಇದೀಗ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.ಇವರಿಗೆ ಚಿಕಿತ್ಸೆ ನೀಡಿದ್ದ ಕಲ್ಲಡ್ಕದ ಖಾಸಗಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.ಇವರಿಗೆ ಸೋಂಕಿನ ಮೂಲ ಯಾವುದು ಎಂದು ದೃಢವಾಗಿಲ್ಲ. ಆಧಾರಸ್ತಂಭವಾಗಿದ್ದರು: ಕಡುಬಡತನದ ಇವರ ಕುಟುಂಬಕ್ಕೆ ಮೃತರೇ ಆಧಾರ ಸ್ತಂಭವಾಗಿದ್ದರು.ಇವರ ಮಗ ಸದ್ಯ ಎಸ್ ಎಸ್ ಎಲ್ ಸಿ.ಯಲ್ಲಿದ್ದಾನೆ. ಈತ ಕಲ್ಲಡ್ಕದಲ್ಲಿ ಹಾಸ್ಟೆಲ್ ವೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದು,ತನ್ನ ತಂದೆಯ ಸಾವಿನ ಸಂದಿಗ್ದ ಸ್ಥಿತಿಯ ಮಧ್ಯೆ ಗುರುವಾರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾನೆ.ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ, ಕಡು ಬಡತನದ ಕುಟುಂಬ ಇವರದ್ದಾಗಿದೆ ಎಂದು ತಿಳಿದು ಬಂದಿದೆ.ಈ ನಡುವೆ ಇಬ್ಬರು ರೋಗಿಗಳಿಗೆ ಹಾಗೂ ಓರ್ವ ನರ್ಸ್ ಗೆ ಕೋವಿಡ್ – 19 (ಕೊರೋನ) ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತುಂಬೆಯ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳ ಗಂಟಲ ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ಇಬ್ಬರು ರೋಗಿಗಳ ವರದಿಯೂ ಪಾಸಿಟಿವ್ ಬಂದಿದೆ. ಅಲ್ಲದೆ ಆಸ್ಪತ್ರೆಯ ನರ್ಸ್ ಒಬ್ಬರ ಕೋವಿಡ್ ಪರೀಕ್ಷೆಯ ವರದಿಯೂ ಪಾಸಿಟಿವ್ ಬಂದಿದ್ದು ಮೂವರನ್ನೂ ಮಂಗಳೂರು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು ತುರ್ತು ಸೇವೆಯನ್ನು ಹೊರೆತು ಪಡಿಸಿ ಬಾಕಿ ಎಲ್ಲಾ ಹೊಸ ಹೊರ, ಒಳ ರೋಗಿಗಳ ಸೇವೆಯನ್ನು ನಿಲ್ಲಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಹೆಚ್ಚಿನ ರೋಗಿಗಳನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಿದ್ದು ಉಳಿದ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ. ಇದೀಗ ತಾಲೂಕಿನ ಜನರು ಮತ್ತೆ ಸೋಂಕಿನ ಭೀತಿಗೊಳಗಾಗಿದ್ದಾರೆ.
