ಬಂಟ್ವಾಳ: ಲಾಕ್ ಡೌನ್ ಇದ್ದಾಗಲೂ ಮೆಹಂದಿ ಸಮಾರಂಭದಲ್ಲಿ ಡಿಜೆ ಹಾಕಿ ಯುವಕರು ಕುಣಿದು ಕುಪ್ಪಳಿಸಿದ್ದಾರೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್.ಐ. ಪ್ರಸನ್ನ ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮುಂಜೆ ಗ್ರಾಮದಲ್ಲಿ ನೆರವೇರಿದ ಮದುವೆ ಸಮಾರಂಭದ ವೇಳೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಯುವಕರು ಧ್ವನಿ ವರ್ಧಕಗಳನ್ನು ಬಳಸಿ ಗುಂಪು ಸೇರಿ ನೃತ್ಯ ಮಾಡುತ್ತಿರುವುದು ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ತನಿಖೆಯನ್ನು ನಡೆಸುತ್ತಿದ್ದು, ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ನಿಯಮದಂತೆ 50 ಜನರು ಸೇರಿ ಮದುವೆ ಸಮಾರಂಭವನ್ನು ನಡೆಸಲು ಸ್ಥಳೀಯ ಪಂಚಾಯತ್ ನಿಂದ ಅನುಮತಿಯನ್ನು ಪಡೆದಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವಕರ ನೃತ್ಯದ ವಿಡಿಯೋ ಲಾಕ್ಡೌನ್ ಸಮಯದಲ್ಲಿ ನ ನಡೆದಿರುವುದೇ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಲಾಕ್ಡೌನ್ ಸಮಯದಲ್ಲಿ ನಡೆದಿರುವುದು ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
