ಕೈಕಂಬ: ಮಹಾಮಾರಿ ಕೊರೋನಾದ ವಿರುದ್ಧ ಕೊರೋನಾ ಸೈನಿಕರಾಗಿ ತಮ್ಮ ಜೀವದ ಹಂಗನ್ನು ತೊರೆದು ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಥಳೀಯ ಆಶಾ ಕಾರ್ಯಕರ್ತರಿಗೆ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ವತಿಯಿಂದ ಅಗತ್ಯ ಸುರಕ್ಷತಾ ಸಾಮಾಗ್ರಿಗಳನ್ನು ಉಚಿತವಾಗಿ ಇಂದು ವಿತರಿಸಲಾಯಿತು.
ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್, ಮುಖ ಕವಚ ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಡ್ಡೂರು ಫೈವ್ ಸ್ಟಾರ್ ಅಧ್ಯಕ್ಷ ಹಬೀಬ್ ಕಟ್ಟಪುಣಿ ವಹಿಸಿದ್ದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
