ಕೋಲಾರ : ಈಗಾಗಲೇ ಪ್ರಗತಿಯಲ್ಲಿರುವ ಶಾಲಾ ಕಾಂಪೌಂಡ್ ಮತ್ತು ಶೌಚಾಲಯ ಕಾಮಗಾರಿ ಯನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಹರಟಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸಿ ಆರ್ ಅಶೋಕ್ ಸೂಚಿಸಿದರು.ಹರಟಿ ಗ್ರಾಮಪಂಚಾಯಿತಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದ ಅವರು ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಕಾಮಗಾರಿ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು.C R ASHOK 1

 

ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಬೆಳಕು, ಸ್ವಚ್ಛತೆಗೆ ಹೆಚ್ಚು ಒತ್ತು ನೀಡಿ, ಕೋರೋನ ಸಾಂಕ್ರಾಮಿಕ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವುದು ಸೇರಿದಂತೆ ಪಂಚಾಯಿತಿಗೆ ಅಗತ್ಯವಿರುವ ಕಂದಾಯ ವಸೂಲಿ ಮಾಡಲು ಅವರು ತಿಳಿಸಿದರು.C R ASHOK 2 (1)
ಸ್ಯಾನಿಟೈಸರ್ ಮಾಸ್ಕ್ ಮತ್ತು ಸಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಅಗತ್ಯವಿದ್ದು ಈ ಬಗ್ಗೆ ಎಲ್ಲರೂ ಸಹಕರಿಸಬೇಕು ಎಂದರು
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ರಾಮಕೃಷ್ಣ ,ಶಾಲಾ ಮುಖ್ಯೋಪಾಧ್ಯಾಯ ಜಿ. ಶ್ರೀನಿವಾಸ್, ಬಿಲ್ ಕಲೆಕ್ಟರ ಶ್ರೀನಿವಾಸ್, ಸಹಶಿಕ್ಷಕರುಗಳಾದ ಕೃಷ್ಣಪ್ಪ , ಗೋವಿಂದಪ್ಪ, ಸೊಣ್ಣೆಗೌಡ, ಮೀನಾ, ಮಮತಾ ಮತ್ತಿತರರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *