ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಗುಡ್ಡ, ಮನೆ ಆವರಣ ತಡೆ ಗೋಡೆ ಸಹಿತ ಪರಂಬೋಕು ನೀರಾವರಿ ತೋಡುಗಳ ಆವರಣ ಗೋಡೆಗಳು ಕುಸಿದ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ ಮುಚ್ಚೂರು ಅವರು ಜಿಲ್ಲಾ ಪಂಚಾಯತ್ ಇಂಜಿನಿಯರ್ ಹಾಗೂ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಭೇಟಿ ನೀಡಿ ಹಾನಿ ಬಗ್ಗೆ ಪರಿಶೀಲನೆ ನಡೆಸಿದರು.

