ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು.
ನಿರ್ಗಮನ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಅವರು ಮಾತನಾಡಿ ಗತ ವರ್ಷದಲ್ಲಿ ರೋಟರಿಯ ಯಶಸ್ಸಿಗೆ ಸಹಕರಿಸಿದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ನೂತನ ಅಧ್ಯಕ್ಷರಾಗಿ ಅ್ಯಂಟನಿ ಸಿಕ್ವೇರಾ, ಉಪಾಧ್ಯಕ್ಷರಾಗಿ ಸುರೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಪ್ರೀತಮ್ ರೋಡ್ರಿಗಸ್,ಕೋಶಾಧಿಕಾರಿಯಾಗಿ ಅರುಣ್ ಮಾಡ್ತ ಮತ್ತಿತರ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಸಹಾಯಕ ಗವರ್ನರ್ ರಿತೇಶ್ ಬಾಳಿಗ, ಕೋಶಾಧಿಕಾರಿ ರಾಮಚಂದ್ರ ಶೆಟ್ಟಿಗಾರ್,ನಿಯೋಜಿತ ಗವರ್ನರ್ ಪ್ರಕಾಶ್ ಕಾರಂತ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಇದೇ ವೇಳೆ ಫಲಾನುಭವಿಗಳಿಗೆ ವೀಲ್ ಚೇಯರ್ ಹಾಗೂ ಹೊಲಿಗೆ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕ್ಲಬ್‌ಗೆ ನೂತನ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.ಸಹಾಯಕ ಗವರ್ನರ್ ಯತೀಶ್ ಕುಮಾರ್ ಸ್ವಾಮಿ ಗೌಡ ಕ್ಲಬ್ ನ ಬುಲೆಟಿನ್ ಬಿಡುಗಡೆಗೊಳಿಸಿ ಶುಭಹಾರೈಸಿದರು. ನಿರ್ಗಮನ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ದಂಪತಿ ಹಾಗೂ ನಿರ್ಗಮನ ಕಾರ್ಯದರ್ಶಿ ಶೃತಿ ಮಾಡ್ತ ದಂಪತಿಯನ್ನು ಸನ್ಮಾನಿಸಲಾಯಿತು. ಪದಗ್ರಹಣ ಅಧಿಕಾರಿಯಾಗಿದ್ದ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮಾತನಾಡಿ ಅಧ್ಯಕ್ಷರಾದವರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಕ್ಲಬ್ ನ್ನು ಮುನ್ನಡೆಸಬೇಕು ಎಂದು ಸಲಹೆ ನೀಡಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಶುಭಹಾರೈಸಿದರು. ವಲಯ ಸೇನಾನಿ ಜಯರಾಮ ರೈ, ನಿಕಟಪೂರ್ವ ಅಧ್ಯಕ್ಷ. ಅವಿಲ್ ಮಿನೇಜಸ್, ಕಾರ್ಯದರ್ಶಿ ಶೃತಿ ಮಾಡ್ತ ಉಪಸ್ಥಿತರಿದ್ದರು. ಸಾಮಾಜಿಕ ಅಂತರದೊಂದಿಗೆ ಸರಳವಾಗಿ ಪದಗ್ರಹಣ ಸಮಾರಂಭ ನಡೆಯಿತು.
