ಬಂಟ್ವಾಳ: ಪಕ್ಷ ನೀಡಿದ ಜವಾಬ್ದಾರಿಗಳನ್ನು ನಿರ್ವಂಚನೆಯಿಂದ ಕಾರ್ಯಗತಗೊಳಿಸಿದಾಗ ಪಕ್ಷ ನಮ್ಮನ್ನು ಗುರುತಿಸುತ್ತದೆ. ಬಿ.ಜೆ.ಪಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತ ಸಂಸದನಾಗಬಹುದು,ಶಾಸಕನಾಗಬಹುದು ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ವಿಧಾನಪರಿತ್ ಸದಸ್ಯ ರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಕ್ಷೇತ್ರ  ಬಿಜೆಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಅವರು ಕ್ಷೇತ್ರ ಸಮಿತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ  ಪಕ್ಷ ನೀಡಿರುವ ಈ ಜವಾಬ್ದಾರಿಗೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು.
IMG-20200710-WA0026
    ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಬಡಗಬೆಳ್ಳೂರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಒಬ್ಬ ಪ್ರಾಮಾಣಿಕ, ಅಧಿಕಾರದ ಆಸೆ ಇಲ್ಲದೆ ತಲೆ ತಲಾಂತರದಿಂದ ಪಕ್ಷಕ್ಕಾಗಿ ದುಡಿದ ಪ್ರತಾಪಸಿಂಹ ನಾಯಕ್ ಅವರು ನಮ್ಮಂತಹ ಸಾಮಾನ್ಯ  ಕಾರ್ಯಕರ್ತರಿಗೆ ಸ್ಪೂರ್ತಿ ಎಂದರು. ಅಭಿನಂದನಾ ಮಾತುಗಳಾನ್ನಾಡಿದ ಜಿಲ್ಲಾ ಬಿ.ಜೆ.ಪಿ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ರವರು ಪ್ರತಾಪಣ್ಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಿಷ್ಠವಾಗಿಸಿದರಲ್ಲದೆ,ಪಕ್ಷಕ್ಕೆ ಸಂಘರ್ಷತ್ಮಾಕ ಮತ್ತು ವ್ಯೂಹಾತ್ಮಕ ಚಟುವಟಿಕೆಗಳನ್ನು ಸೂಕ್ತ ವ್ಯಕ್ತಿಗಳನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿದ್ದರು. ಅವರು ಅದೇಷ್ಟೋ ಸಾಮಾನ್ಯ ಕಾರ್ಯಕರ್ತರನ್ನು ಬೆಳಸಿ ಜನಪ್ರತಿನಿಧಿಗಳನ್ನಾಗಿಸಿದವರು ಎಂದರು.   ಕ್ಷೇತ್ರದ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿದರು. ಉಪಾಧ್ಯಕ್ಷರಾದ ಚಿದಾನಂದ ರೈ ಉಳಿ ವಂದಿಸಿದರು.

By suddi9

Leave a Reply

Your email address will not be published. Required fields are marked *